ರಾಘವೇಶ್ವರ ಶ್ರೀಗಳ ವಿರುದ್ಧದ 2ನೇ ಅತ್ಯಾಚಾರ ಪ್ರಕರಣ: ಎಸ್‌ಪಿಪಿ ವಾದವೇನು?

ರಾಘವೇಶ್ವರ ಶ್ರೀಗಳ ವಿರುದ್ಧದ 2ನೇ ಅತ್ಯಾಚಾರ ಪ್ರಕರಣ: ಎಸ್‌ಪಿಪಿ ವಾದವೇನು?

ಬೆಂಗಳೂರು, ಶುಕ್ರವಾರ, 18 ಸೆಪ್ಟಂಬರ್ 2015 (17:37 IST)

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ಶ್ರೀ ರಾಘವೇಶ್ವರ ಭಾರತಿ ಶ್ರೀಗಳ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನಗರದ 52ನೇ ಸೆಷನ್ಸ್ ಕೋರ್ಟ್‌ ಇಂದು ವಿಚಾರಣೆ ನಡೆಸುತ್ತಿದ್ದು, ಸರ್ಕಾರಿ ವಿಶೇಷ ಅಭಿಯೋಜಕ ಎ.ಎಸ್.ಪೊನ್ನಣ್ಣ ಅವರು ಶ್ರೀಗಳಿಗೆ ಜಾಮೀನು ಮಂಜೂರು ಮಾಡದಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ನ್ಯಾಯಾಲಯದಲ್ಲಿ ಇಂದು ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಸರ್ಕಾರ ಹಾಗೂ ಸಂತ್ರಸ್ತ ಮಹಿಳೆಯ ಪರ ವಾದ ಮಂಡಿಸಿದ ಎಸ್‌ಪಿಪಿ ಪೊನ್ನಣ್ಣ, ಶ್ರೀಗಳು ಈ ಮೊದಲೇ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಸೂಚಿಸಿದ್ದ ಕೆಲ ಷರತ್ತುಗಳನ್ನು ಪಾಲಿಸಿಲ್ಲ. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಪ್ರಸ್ತುತ ದೂರು ದಾಖಲಿಸಿರುವ ಎರಡನೇ ದೂರುದಾರ ಮಹಿಳೆಯು ತನ್ನ ದೂರಿನಲ್ಲಿ ಶ್ರೀಗಳು ದೇವರ ಹೆಸರಿನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಆರೋಪಿ ಶ್ರೀಗಳಿಗೆ ಜಾಮೀನು ಮಂಜೂರು ಮಾಡಬಾರದು ಎಂದು ವಾದ ಮಂಡಿಸುವ ಮೂಲಕ ಜಾಮೀನು ಅರ್ಜಿ ತಿರಸ್ಕರಿಸುವಂತೆ ಮನವಿ ಮಾಡಿದರು. ಎಸ್‌ಪಿಪಿ ಅವರ ಈ ವಾದಕ್ಕೆ ಶ್ರೀಗಳ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ಶ್ರೀಗಳ ವಿರುದ್ಧ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣ ಇದಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ಶ್ರೀಗಳು ತನ್ನ ಮೇಲೆ 2006 ಮತ್ತು 2010ರಲ್ಲಿ ಎರಡು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಶ್ರೀಗಳ ವಿರುದ್ಧ ದೂರು ಸಲ್ಲಿಸಿದ್ದರು.

ಇನ್ನು ಶ್ರೀಗಳ ವಿರುದ್ದ ಈ ಹಿಂದೆ ಮಠದಲ್ಲಿಯೇ ರಾಮಕತಾ ಗಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಮಲತಾ ಎಂಬುವವರು ಶ್ರೀಗಳು ನನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.

source: http://www.kannada.webdunia.com/article/karnataka-news/second-rape-case-of-raghaveshwara-shree-argument-of-government-spp-115091800037_1.html

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s