ತನಿಖೆ ಶೀಘ್ರ ಮುಗಿಸಲು ಮಹಿಳಾ ಸಂಘಟನೆಗಳ ಆಗ್ರಹ

ರಾಘವೇಶ್ವರ ಶ್ರೀ ವಿರುದ್ಧ ಪ್ರತಿಭಟನೆ

ತನಿಖೆ ಶೀಘ್ರ ಮುಗಿಸಲು ಮಹಿಳಾ ಸಂಘಟನೆಗಳ ಆಗ್ರಹ

Published: 29 Sep 2015 11:39 AM IST

ರಾಘವೇಶ್ವರ ಸ್ವಾಮೀಜಿ ವಿರುದ್ಧ ತನಿಖೆ ಪೂರ್ಣಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನ ಬಳಿ ಪ್ರತಿಭಟನೆ ನಡೆಸ
ಬೆಂಗಳೂರು: ದೇವರ ಹೆಸರಿನಲ್ಲಿ ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪಿ ರಾಘವೇಶ್ವರ ಭಾರತಿ ಸ್ವಾಮೀಜಿ ಯ ವಿರುದ್ಧ ಶೀಘ್ರ ತನಿಖೆ ಮುಗಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.

ಸೋಮವಾರ ಸ್ವಾತಂತ್ರ್ಯ ಉದ್ಯಾನ ಬಳಿ ಡೆದ ಈ ಪ್ರತಿಭಟನೆಯಲ್ಲಿ ದುಡಿಯುವ ಮಹಿಳೆಯರ ಸಮನ್ವಯ ಸಮಿತಿ, ಭಾರತ ವಿದ್ಯಾರ್ಥಿ ಫೆಡರೇಷನ್, ವಿದ್ಯಾರ್ಥಿನಿಯರ ಉಪ ಸಮಿತಿ, ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಮಹಿಳೆಯರ ಉಪ ಸಮಿತಿ, ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘಟನೆಗಳ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದಕ್ಕೂ ಮೊದಲು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತನಾಡಿದ ಮಹಿಳಾ ಸಂಘಟನೆ ಅಧ್ಯಕ್ಷೆ ವಿಮಲಾ, ಅತ್ಯಾಚಾರ ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಕಪಟಿ ಸ್ವಾಮಿಗಳ ವಿರುದ್ದ ಸಾರ್ವಜನಿಕರು ಎಚ್ಚೆತ್ತು ಕೊಳ್ಳಬೇಕು ಎಂದರು.

Source: http://www.kannadaprabha.com/district-news/womens-organizations-protested-against-raghaveshwara-bharathi-in-bengaluru/260088.html

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s