ರಾಘವೇಶ್ವರ ಪ್ರಕರಣದ ತನಿಖೆ ವಿಳಂಬ: ಕಾರಣ ಕೇಳಿದ ಗವರ್ನರ್‌

ರಾಘವೇಶ್ವರ ಪ್ರಕರಣದ ತನಿಖೆ ವಿಳಂಬ: ಕಾರಣ ಕೇಳಿದ ಗವರ್ನರ್‌

Published 01-Oct-2015 12:25 IST

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ವಿಳಂಬ ಪ್ರಶ್ನಿಸಿರುವ ರಾಜ್ಯಪಾಲ ವಜುಭಾಯ್‌ ವಾಲಾ ಈ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ.

ಪ್ರಕರಣದ ತನಿಖೆ ವಿಳಂಬವಾಗುತ್ತಿದ್ದು, ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಈ ಹಿಂದೆ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯಪಾಲರಿಗೆ ಮನವಿ ಮಾಡಿತ್ತು. ಇದೀಗ ಆ ಮನವಿಗೆ ಸ್ಪಂದಿಸಿರುವ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿದ್ದಾರೆ.

ತನಿಖೆ ವಿಳಂಬ ಆಗುತ್ತಿರುವುದಕ್ಕೆ ಆಕ್ಷೇಪ ಹಾಗೂ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯಪಾಲರು, ವಿಳಂಬ ಏಕೆ ಆಗುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಮಹಿಳಾ ದೌರ್ಜನ್ಯದ ವಿಚಾರದಲ್ಲಿ ನಿಮ್ಮ ನಿರ್ಲಕ್ಷ್ಯವೇಕೆ? ಎಂದು ಕೇಳುವ ಮೂಲಕ ಸರ್ಕಾರದ ನಡವಳಿಕೆಯನ್ನು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿತ್ತು. ಈ ದೂರು ಬಂದ ಹಿನ್ನೆಲೆಯಲ್ಲಿ ಈ ವರದಿ ಕೇಳಲಾಗಿದೆ. ರಾಘವೇಶ್ವರ ಶ್ರೀಗಳ ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಇದೇ ಮೊದಲ ಬಾರಿಗೆ ರಾಜ್ಯಪಾಲರು ಪ್ರಶ್ನೆ ಎತ್ತಿದ್ದಾರೆ. ಸಾಮಾನ್ಯವಾಗಿ ಅತ್ಯಾಚಾರ ಪ್ರಕರಣದ ಕುರಿತು ಯಾವ ಮಾದರಿಯ ತನಿಖೆ ನಡೆಯಬೇಕೋ ಆ ರೀತಿ ನಡೆಯುತ್ತಿಲ್ಲ. ಯಾವ್ಯಾವ ಅಂಶವನ್ನು ಆಧಾರವಾಗಿಟ್ಟುಕೊಂಡು ನೀವು ತನಿಖೆ ನಡೆಸುತ್ತಿದ್ದೀರಿ? ಸಿಐಡಿ ತನಿಖೆ ಏನು ವರದಿ ನೀಡಿದೆ? ವಿಳಂಬ ಧೋರಣೆಗೆ ಕಾರಣವೇನು? ರಾಜ್ಯಾದ್ಯಂತ ಇಷ್ಟೊಂದು ವಿರೋಧ, ಖಂಡನೆ ವ್ಯಕ್ತವಾಗುತ್ತಿದ್ದರೂ ತಟಸ್ಥವಾಗಿ ಸರ್ಕಾರ ಕಾರ್ಯನಿರ್ವಹಿಸಲು ಕಾರಣವೇನು? ಎಂದು ಅವರು ಪ್ರಶ್ನಿಸಿದ್ದಾರೆ.

source: http://kannada.eenaduindia.com/State/Bangalore/2015/10/01122519/Raghweshwar-rape-case-investigation-delay-Governor.vpf

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s