ರಾಘವೇಶ್ವರ ಶ್ರೀಗೆ ಮತ್ತೆ ಸಂಕಟ: ತುರ್ತು ನೋಟಿಸ್ ಜಾರಿ ಮಾಡಿದ ನ್ಯಾಯಾಲಯ

ರಾಘವೇಶ್ವರ ಶ್ರೀಗೆ ಮತ್ತೆ ಸಂಕಟ: ತುರ್ತು ನೋಟಿಸ್ ಜಾರಿ ಮಾಡಿದ ನ್ಯಾಯಾಲಯ

Published: 29 Apr 2016 08:43 AM IST | Updated: 29 Apr 2016 08:43 AM IST

ರಾಘವೇಶ್ವರ ಶ್ರೀ
ಬೆಂಗಳೂರು: ರಾಘವೇಶ್ವರ ಶ್ರೀ ಸ್ವಾಮೀಜೆ ಮತ್ತೆ ತಲೆ ಬಿಸಿಯಾಗಿದ್ದು, ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪು ರದ್ದು ಕೋಟಿ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಲಿಸಿದ್ದು, ತುರ್ತು ನೋಟಿಸ್ ಜಾರಿ ಮಾಡಿದೆ.

ಸಿಐಡಿ ತನಿಖಾಧಿಕಾರಿಗಳು ರಾಘವೇಶ್ವರ ಶ್ರೀಗಳ ಮೇಲೆ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಅವರಿದ್ದ ಏಕಸದಸ್ಯ ಪೀಠ ನಿನ್ನೆ ವಿಚಾರಣೆ ನಡೆಸಲು ಅಂಗೀಕರಿಸಿದೆ. ಅಲ್ಲದೆ, ಸ್ವಾಮೀಜಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ತರಿಸುವಂತೆ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ರಾಮಕಥಾ ಗಾಯಕಿಯಾದ ಪ್ರೇಮಲತಾ ಅವರು ದಾಖಲಿಸಿದ್ದ ಅತ್ಯಾಚಾರ ದೂರು ಕುರಿತಂತೆ ವಿಚಾರಣೆ ಪೂರ್ಣಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ. ಮುದಿಗೌಡರ್ ಅವರು ಮಾ.31ರಂದು ರಾಘವೇಶ್ವರ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ತೀರ್ಪು ಪ್ರಕಟಿಸಿದ್ದರು. ಈ ತೀರ್ಪು ರದ್ದು ಕೋರಿ ಸಿಐಡಿ ತನಿಖಾಧಿಕಾರಿಗಳು ಹೈ ಕೋರ್ಟ್ ಮೆಟ್ಟಿಲೇರಿದ್ದಾರೆ.

ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಸಾಬೀತುಪಡಿಸಲು ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದರು. ಆದರೆ, ಸಿಐಡಿ ತನಿಖಾ ವರದಿಯಲ್ಲಿ ಸ್ವಾಮೀಜಿ ಅವರು ಅತ್ಯಾಚಾರ ನಡೆಸಿದ ಬಗ್ಗೆ ಸಾಕ್ಷ್ಯಾಧಾರಗಳು ಇವೆ. ಅವುಗಳನ್ನು ಸೆಷನ್ಸ್ ನ್ಯಾಯಾಧೀಶರು ಮಾನ್ಯ ಮಾಡಿಲ್ಲ. ಪ್ರಕರಣದ ಮುಖ್ಯ ವಿಚಾರಣೆ ನಡೆಯುವ ಮುನ್ನವೇ ಸ್ವಾಮೀಜಿಯವರನ್ನು ಆರೋಪ ಮುಕ್ತಗೊಳಿಸಿರುವುದು ಕಾನೂನು ಬಾಹಿರ. ಹೀಗಾಗಿ, ಸೆಷನ್ಸ್ ನ್ಯಾಯಾಧೀಶರ ತೀರ್ಪು ರದ್ದುಪಡಿಸುವಂತೆ ಮೇಲ್ಮನವಿಯಲ್ಲಿ ತನಿಖಾಧಿಕಾರಿಗಳು ಕೋರಿದ್ದಾರೆ.

ಇದರಂತೆ ಸ್ವಾಮೀಜಿ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇದೇ ವೇಳೆ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಮತ್ತು ನ್ಯಾ. ರವಿ ಮಳೀಮಠ ಅವರಿದ್ದ ಪೀಠ, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಮನವಿಪತ್ರ ಸಲ್ಲಿಸುವಂತೆ ಅರ್ಜಿದಾರನಿಗೆ ಸೂಚನೆ ನೀಡಿದ್ದಾರೆ.

ಸ್ವಾಮೀಜಿ ವಿರುದ್ಧ ಸಲ್ಲಿಕೆಯಾದ ಪಿಐಎಲ್‌ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ.ಮುಖರ್ಜಿ ಮತ್ತು ನ್ಯಾ| ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠ, ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ಮನವಿಪತ್ರ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತು. ಹಾಗೆಯೇ, ರಾಘವೇಶ್ವರ ಭಾರತೀ ಸ್ವಾಮೀಜಿ, ರಾಮಚಂದ್ರಾಪುರ ಮಠ, ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತು ರಾಜ್ಯ ಮುಖ್ಯ ಆದಾಯ ತೆರಿಗೆ ಆಯುಕ್ತರಿಗೆ ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿತು.

kp29042016_29_04_2016_003_071

kp_29042016_29_04_2016_004_007

kp_29042016_29_04_2016_004_006

source: http://www.kannadaprabha.com/karnataka/rape-case-court-issues-notice-to-seer/274571.html

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s