ರಾಘವೇಶ್ವರ ಶ್ರೀ ವಿರುದ್ಧ ಮೇಲ್ಮನವಿ: ಪ್ರೇಮಲತಾ ಅರ್ಜಿ ಸ್ವೀಕರಿಸಿದ ಕೋರ್ಟ್

ರಾಘವೇಶ್ವರ ಶ್ರೀ ವಿರುದ್ಧ ಮೇಲ್ಮನವಿ: ಪ್ರೇಮಲತಾ ಅರ್ಜಿ ಸ್ವೀಕರಿಸಿದ ಕೋರ್ಟ್

May 3, 2016
ಬೆಂಗಳೂರು: ರಾಘವೇಶ್ವರ ಶ್ರೀಗಳನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಪ್ರಕರಣದ ಸಂತ್ರಸ್ತೆ ಪ್ರೇಮಲತಾ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಇದೇ ಪ್ರಕರಣದ ಸಂಬಂಧ ರಾಜ್ಯ ಸರ್ಕಾರ ಕೂಡಾ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದು ಇದೀಗ ಪ್ರೇಮಲತಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶ್ರೀಗಳನ್ನು ಆರೋಪಮುಕ್ತಗೊಳಿಸಿ ನಗರದ 54ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಮುದಿಗೌಡರ್ ನೀಡಿರುವ ಆದೇಶ ರದ್ದುಗೊಳಿಸುವಂತೆ ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲ್ಮನವಿಯಲ್ಲಿ ಕೋರಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ರಜಾಕಾಲದ ಹೈಕೋರ್ಟ್ ಏಕಸದಸ್ಯ ಪೀಠ, ರಾಘವೇಶ್ವರ ಭಾರತಿ ಸ್ವಾಮೀಜಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಧೀನ ನ್ಯಾಯಾಲಯದಿಂದ ತರಿಸಲು ಸೂಚಿಸಿದೆ.

ಇದೇ ವೇಳೆ ಪ್ರೇಮಲತಾ ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಶ್ರೀಗಳ ಪರ ವಕೀಲರು, ಸರ್ಕಾರಕ್ಕೆ ಮಾತ್ರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದು, ಪ್ರೇಮಲತಾ ಶಾಸ್ತ್ರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದ್ರು. ಮನವಿ ತಿರಸ್ಕರಿಸಿದ ನ್ಯಾಯಾಲಯ, ಪ್ರೇಮಲತಾ ಅರ್ಜಿಯನ್ನು ಸಿಐಡಿ ಪೊಲೀಸರು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯೊಂದಿಗೆ ವಿಚಾರಣೆಗೆ ನಿಗದಿಪಡಿಸಲು ನಿರ್ದೇಶಿಸಿ ವಿಚಾರಣೆ ಮುಂದೂಡಿತು.

source: http://publictv.in/high-court-issues-notice-to-raghaveshwara-bharathi-in-rape-case/

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s