ಹೈಕೋರ್ಟ್‌ ಮೆಟ್ಟಿಲೇರಿದ ಪ್ರೇಮಲತಾ

ಹೈಕೋರ್ಟ್‌ ಮೆಟ್ಟಿಲೇರಿದ ಪ್ರೇಮಲತಾ

ಉದಯವಾಣಿ, May 04, 2016, 3:30 AM IST

ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸಿ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನೀಡಿದ್ದ ತೀರ್ಪಿನ ವಿರುದ್ಧ ಈಗ ಪ್ರಕರಣದ ಸಂತ್ರಸ್ತೆ ಪ್ರೇಮಲತಾ ದಿವಾಕರ ಶಾಸ್ತ್ರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಇದೇ ವಿಚಾರ ಸಂಬಂಧ ಕೆಲ ದಿನಗಳ ಹಿಂದೆ ಸ್ವಾಮೀಜಿ ವಿರುದ್ಧ ರಾಜ್ಯ ಸರಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಈಗ ಪ್ರೇಮಲತಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ತಮ್ಮ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಆರೋಪ ಮುಕ್ತಗೊಳಿಸಿ ನಗರದ 54ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಮುದಿಗೌಡರ್‌ ಅವರು ಮಾರ್ಚ್‌ 31ರಂದು ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ್‌ ಅವರು ಮೇಲ್ಮನವಿಯಲ್ಲಿ ಕೋರಿದ್ದಾರೆ.

ಮಂಗಳವಾರ ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ರಜಾಕಾಲದ ಏಕಸದಸ್ಯ ಪೀಠ, ರಾಘವೇಶ್ವರ ಭಾರತಿ ಸ್ವಾಮೀಜಿ ಅವರಿಗೆ ನೋಟಿಸ್‌ ಜಾರಿ ಮಾಡಿತು. ಬಳಿಕ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಅಧೀನ ನ್ಯಾಯಾಲಯದಿಂದ ತರಿಸಲು, ಈ ಮೇಲ್ಮನವಿಯನ್ನು ರಾಜ್ಯ ಸರಕಾರ (ಸಿಐಡಿ ತನಿಖಾಧಿಕಾರಿ) ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿಯೊಂದಿಗೆ ವಿಚಾರಣೆಗೆ ನಿಗದಿಪಡಿಸಲು ನಿರ್ದೇಶಿಸಿತು.

ಸ್ವಾಮೀಜಿ ಅವರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಕುರಿತು ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಿವೆ. ಪ್ರಕರಣದಲ್ಲಿ ಸಾಮೀಜಿ ವಿರುದ್ಧ ಸಿಐಡಿ ಪೊಲೀಸರು ದೋಷಾರೋಪ ಪಟ್ಟಿಯನ್ನೂ ದಾಖಲಿಸಿದ್ದಾರೆ. ಆದರೂ ಸ್ವಾಮೀಜಿ ಅವರು ಅತ್ಯಾಚಾರ ನಡೆಸಿದ ಬಗ್ಗೆ ಸಾಕ್ಷ್ಯಾಧಾರ ಇಲ್ಲ ಎಂದು ಅಭಿಪ್ರಾಯಪಟ್ಟು ಅವರನ್ನು ಆರೋಪ ಮುಕ್ತಗೊಳಿಸಿ ಸೆಷನ್ಸ್‌ ನ್ಯಾಯಾಧೀಶರು ನೀಡಿದ ತೀರ್ಪು ಸರಿಯಲ್ಲ. ಹೀಗಾಗಿ, ಸೆಷನ್ಸ್‌ ನ್ಯಾಯಾಧೀಶರ ತೀರ್ಪು ರದ್ದುಪಡಿಸುವಂತೆ ಪ್ರೇಮಲತಾ ಕೋರಿದ್ದಾರೆ.

uv_Man04051605MEdn01

source: http://www.udayavani.com/kannada/news/state-news/145911/state-news

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s