ಅರ್ಜಿ ಹಿಂದಕ್ಕೆ ಪಡೆದ ರಾಘವೇಶ್ವರ ಶ್ರೀಗಳು

ಅರ್ಜಿ ಹಿಂದಕ್ಕೆ ಪಡೆದ ರಾಘವೇಶ್ವರ ಶ್ರೀಗಳು

ಪ್ರಜಾವಾಣಿ ವಾರ್ತೆ
25 Aug, 2016

ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ವೈದ್ಯಕೀಯ ಪರೀಕ್ಷೆಗೆ ಒಳಪಡಲು ಪೊಲೀಸರು ನೀಡಿದ್ದ ನೋಟಿಸ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರಾಘವೇಶ್ವರ ಶ್ರೀಗಳು ಹಿಂದಕ್ಕೆ ಪಡೆದಿದ್ದಾರೆ.
ರಾಘವೇಶ್ವರ ಶ್ರೀ

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ವೈದ್ಯಕೀಯ ಪರೀಕ್ಷೆಗೆ ಒಳಪಡಲು ಪೊಲೀಸರು ನೀಡಿದ್ದ ನೋಟಿಸ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ರಾಘವೇಶ್ವರ ಶ್ರೀಗಳು ಹಿಂದಕ್ಕೆ ಪಡೆದಿದ್ದಾರೆ.

ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರ ಏಕಸದಸ್ಯ ನ್ಯಾಯಪೀಠದ ಎದುರು ಬುಧವಾರ ಅರ್ಜಿ ವಿಚಾರಣೆಗೆ ಬಂದಾಗ ರಾಘವೇಶ್ವರ ಶ್ರೀಗಳ ಪರ ವಕೀಲರು, ಅರ್ಜಿ ಹಿಂದಕ್ಕೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಭಾಗೀಯ ಪೀಠವು ಮುಖ್ಯ ಅರ್ಜಿಯನ್ನು ವಿಲೇವಾರಿ ಮಾಡಿದೆ. ಆದ್ದರಿಂದ ಈ ಅರ್ಜಿ ವಿಚಾರಣೆ ನಡೆಸುವುದು ಸೂಕ್ತವಲ್ಲ.

ಅವಶ್ಯಕತೆ ಬಿದ್ದರೆ ಪುನಃ ಅರ್ಜಿ ಸಲ್ಲಿಸುವ ಅವಕಾಶವನ್ನು ಮುಕ್ತವಾಗಿರಿಸಬೇಕು ಮತ್ತು ಈ ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಬೇಕು ಎಂದು ರಾಘವೇಶ್ವರ ಶ್ರೀಗಳ ಪರ ವಕೀಲರು ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

http://www.prajavani.net/news//article/2016/08/25/433530.html

pv20160825

ಹೈಕೋರ್ಟ್‌ನಿಂದ ಅರ್ಜಿ ಹಿಂಪಡೆದ ರಾಘವೇಶ್ವರ ಶ್ರೀ

ಉದಯವಾಣಿ, Aug 25, 2016, 9:58 AM IST

ಬೆಂಗಳೂರು: ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಸಿಐಡಿ ಪೊಲೀಸರು ನೀಡಿದ್ದ ನೋಟಿಸ್‌ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಬುಧವಾರ ಹಿಂಪಡೆದಿದ್ದಾರೆ. ಬುಧವಾರ ಸ್ವಾಮೀಜಿ ಪರ ವಕೀಲರು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಹಾಜರಾಗಿ, ಅತ್ಯಾಚಾರ ಆರೋಪದಿಂದ ಸ್ವಾಮೀಜಿಯವರನ್ನು ಅಧೀನ ನ್ಯಾಯಾಲಯ ಖುಲಾಸೆಗೊಳಿಸಿದೆ. ಹೀಗಾಗಿ, ಈ ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ನೀಡಿದ್ದ ನೋಟಿಸ್‌ ಮಾನ್ಯತೆ ಕಳೆದುಕೊಳ್ಳಲಿದೆ. ಆದ ಕಾರಣ ಅರ್ಜಿ ಹಿಂಪಡೆಯಲು ಅನುಮತಿ ನೀಡುವಂತೆ ಕೋರಿದರು. ಅಲ್ಲದೆ, ಅಗತ್ಯ ಬಿದ್ದರೆ ಮತ್ತೆ ಅರ್ಜಿ ಸಲ್ಲಿಸುವ ಅವಕಾಶ ಮುಕ್ತವಾಗಿರಿಸುವಂತೆ ಮನವಿ ಮಾಡಿದರು. ಇದರಿಂದ ನ್ಯಾಯಪೀಠವು ಅರ್ಜಿ ಹಿಂಪಡೆಯಲು ಅನುಮತಿ ನೀಡಿತು.

http://www.udayavani.com/kannada/news/state-news/165603/state-news

Advertisements

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s